ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು ನಟ ದರ್ಶನ್ ಒಬ್ಬರೇ ಆಗಿರುವುದರಿಂದ ಸಿಪಿ ಯೋಗೇಶ್ವರ್ ಹೇಳಿಕೆ ಈಗ ಬಾರಿ ಚರ್ಚೆಗೆ ದಾರಿಯಾಗಿದೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದಿದ್ದ ಡಿ.ಕೆ.ಸುರೇಶ್, ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ. ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ರು ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಪ್ಲ್ಯಾನ್ ಮಾಡಿದ್ದರು. ಡಿಕೆ ಬ್ರದರ್ಸ್ ಪ್ಲ್ಯಾನ್ ಮಾಡಿದ್ದ ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದ ಎಂದ ಸಿಪಿ. ಯೋಗೇಶ್ವರ್ ಹೇಳಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತು ಸಂಗಡಿಗರು ಜೈಲು ಪಾಲಾಗಿದ್ದಾರೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಬಂಧಿತ ಆರೋಪಿಗಳಿಗೆ ವಿಚಾರಣೆ ಮಾಡುತ್ತಿದ್ದಾರೆ.