ಪೋಕ್ಸೋ ಪ್ರಕರಣ : ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಬೇಡ, ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

Most read

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.  ಯಡಿಯೂರಪ್ಪ ಪರ ಖ್ಯಾತ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರೆ, ಸರ್ಕಾರದ ಪರ ಎಜಿ ಶಶಿಕಿರಣ್ ವಾದ ಮಂಡಿಸಿದ್ದರು.

ಅಲ್ಲದೇ ಮಾಜಿ ಸಿಎಂ ಬಂಧಿಸದಂತೆ ಹೈಕೋರ್ಟ್ ಆದೇಶಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಹೈಕೋರ್ಟ್ ನ್ಯಾಯಪೀಠ ತಾಕೀತು ಮಾಡಿದೆ.

ಬಿ.ಎಸ್.ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರ ಜೂ.12 ರಂದು ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿಮಾಡಿತ್ತು. ಇದರ ಬೆನ್ನಲ್ಲೇ, ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. 

ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್‌ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್‌ ಮೆಟ್ಟಿಲೇರಿ ಪ್ರಕರಣದ ದಾಖಲಾಗಿ ಮೂರು ತಿಂಗಳಾದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಇಷ್ಟು ದಿನವಾದರೂ ಯಡಿಯೂರಪ್ಪ ಅವರನ್ನು ಬಂಧಿಸಿಲ್ಲ ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಅಷ್ಟೇ ಅಲ್ಲದೇ ಸಂತ್ರಸ್ತೆಯ ಪುತ್ರ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶಿಸಿ ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನಡೆಯುತ್ತಿರುವ ಈ ಎಲ್ಲಾ ಬೆಳವಣಿಗೆ ನೋಡಿ ಬಿಎಸ್‌ವೈ ಬಂಧನವಾಗುತ್ತಾ ಎಂಬ ಪ್ರಶ್ನೆ ಈಗ ಮೂಡಿತ್ತು. ಇದೀಗ ಇದಕ್ಕೆ ತೆರೆ ಬಿದ್ದಿದೆ. ಬಿ ಎಸ್‌ ವೈಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಸಿಕ್ಕಿದ್ದು, ಬಿಗ್‌ ರಿಲೀಫ ಸಿಕ್ಕಿದೆ.

More articles

Latest article