ಸುಳ್ಯ ಸರ್ಕಾರಿ ಶಾಲೆ ಜಗಲಿಯಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊ*ಲೆ: ಸ್ಥಳಕ್ಕೆ ಪೊಲೀಸರು ಹಾಜರು

ಕೊಲೆಗೈದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಸರ್ಕಾರಿ ಶಾಲೆಯ ಜಗಲಿಯಲ್ಲಿ ಜೂ. 17ರ ಸೋಮವಾರ ಬೆಳಗ್ಗೆ ನಡೆದಿದೆ.

ಯುವಕನ ಮೃತದೇಹ ಪತ್ತೆಯಾಗಿದೆ. ಸುಮಾರು 25-30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಆತನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಕಂಡುಬಂದಿದೆ.

ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ಭಾನುವಾರ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಇದೇ ರೀತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು. ಆರೋಪಿಯನ್ನು ಬಂಧಿಸಿದ್ದರು.

More articles

Latest article

Most read