ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯ; ಇಂದು ಪರಪ್ಪನ ಅಗ್ರಹಾರ ಜೈಲು ಸೇರತ್ತ ‌ʼಡಿʼ ಗ್ಯಾಂಗ್?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ ಪಡದಿರುವ ಕಾರಣ ಮತ್ತೊಮ್ಮೆ ಆರೋಪಿಗಳನ್ನು ಪೊಲೀಸರು ಸುಪರ್ದಿಗೆ ಪಡೆಯುವ ಸಾಧ್ಯತೆಗಳು ಕಡಿಮೆಯಿದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಳಗಾದರೆ ದರ್ಶನ್ ಮತ್ತು ಅವರ ಗ್ಯಾಂಗ್ ಅಂತಿಮವಾಗಿ ಜೈಲು ಸೇರಲಿದೆ.

ನ್ಯಾಯಾಲಯದ ಮುಂದೆ ಗುರುವಾರ ದರ್ಶನ್ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಮತ್ತೆರೆಡು ದಿನ ಕಸ್ಟಡಿಗೆ ಪೊಲೀಸರು ಪಡೆದಿದ್ದರು. ಈ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ ರನ್ನು ಅವರನ್ನು ಮತ್ತೆ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಇನ್ನು ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಪ್ರಿಯತಮೆ ಪವಿತ್ರಾಗೌಡ ಸೇರಿದಂತೆ 13 ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

More articles

Latest article

Most read