ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ.
ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರನ್ನು ವಿಚಾರಣೆ ನಡಿಸಿ ಹೇಳಿಕೆ ದಾಖಲಿಸಿಕೊಂಡಿದೆ.
ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ (CBI) ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ನಿಗಮದಿಂದ ಒಟ್ಟು 94 ಕೋಟಿ 73 ಲಕ್ಷ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಎಸ್ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಹುಡುಕುತ್ತಾ ಹೊರಟ ಪೊಲೀಸರಿಗೆ ನಿಗಮದಲ್ಲಿ ಅಕ್ರಮವಾಗಿದೆ ಎಂದು ತಿಳಿದು ತನಿಖೆ ಆರಂಭಿಸಿದರು.