ಜಾಮೀನಿಗೆ ಮಧ್ಯಂತರ ತಡೆ: ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂ

Most read

ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಗೆ ನೀಡಲಾಗಿದ್ದ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ರಜಾಕಾಲದ ಪೀಠ ಅರ್ಜಿಯ ವಿಚಾರಣೆ ಜೂನ್ 26ಕ್ಕೆ ಮುಂದೂಡಿದೆ.

ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಸಲ್ಲಸಿದ್ದ ಅರ್ಜಿಯನ್ನು ಸೋಮವಾರ ಕೈಗೆತ್ತುಕೊಂಡ ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಅವರ ಮನವಿಯ ಕುರಿತು ಯಾವುದೇ ತಕ್ಷಣದ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಆದೇಶವು ಮೊದಲು ದಾಖಲೆಗೆ ಬರಲಿ. ಆದೇಶವಿಲ್ಲದೆ ನಾವು ಸದ್ಯಕ್ಕೆ ಯಾವುದೇ ತಕ್ಷಣದ ಆದೇಶವನ್ನು ನೀಡಲು ಸಾಧ್ಯವಿಲ್ಲ ಮುಂದಿನ ವಾರ ಪ್ರಕರಣದ ವಿಚಾರಣೆ ಮುಂದುವರಿಸಬಹುದು ಎಂದು ಜೂ26ಕ್ಕೆ ಮುಂದೂಡಿದ್ದಾರೆ.

ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಶುಕ್ರವಾರ ಹೈಕೋರ್ಟ್‌ ನ್ಯಾಯಮೂರ್ತಿ ಸುಧೀರ್‌ಕುಮಾರ್ ಜೈನ್ ಮಧ್ಯಂತರ ತಡೆ ನೀಡಿದ್ದರು.

More articles

Latest article