ಲೋಕಸಭಾ ಉಪಸಭಾಪತಿ ಸ್ಥಾನವನ್ನು ಇಂಡಿಯಾ ಮೈತ್ರಿಕೂಟಕ್ಕೆ ಬಿಟ್ಟುಕೊಟ್ಟರೆ. ಪ್ರತಿಪಕ್ಷಗಳು ಎನ್ ಡಿ ಎ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.
ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತವನ್ನು ಕೋರಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದರು. ಆದಾಗ್ಯೂ, ಉಪಸಭಾಪತಿ ಸ್ಥಾನಕ್ಕಾಗಿ ಪ್ರತಿಪಕ್ಷಗಳ ಬೇಡಿಕೆಗೆ ರಾಜನಾಥ್ ಸಿಂಗ್ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಮಾಧ್ಯಗಳ ಜೊತೆ ಮಾತನಾಡಿದ್ದಾರೆ.
ಪ್ರತಿಪಕ್ಷಗಳು ಸರ್ಕಾರದೊಂದಿಗೆ ರಚನಾತ್ಮಕವಾಗಿ ಸಹಕರಿಸಬೇಕು ಎಂದು ಪ್ರಧಾನಿ ಹೇಳಿದರು. ಪ್ರತಿಪಕ್ಷಗಳು ಸ್ಪೀಕರ್‌ಗೆ ಬೆಂಬಲ ನೀಡುವುದಾಗಿ ಸ್ಪಷ್ಟವಾಗಿ ಹೇಳಿವೆ, ಆದಾಗ್ಯೂ, ಉಪಸಭಾಪತಿ ಸ್ಥಾನವನ್ನು ಪ್ರತಿಪಕ್ಷಗಳಿಗೆ ಬಿಟ್ಟುಕೊಡಬೇಕು ಎಂಬುದನ್ನು ಮುಂದಿಟ್ಟಿದ್ದೇವೆ. ರಚನಾತ್ಮಕ ಸಹಕಾರ ಇರಬೇಕು ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ ಮತ್ತೀಗ ನಮ್ಮ ನಾಯಕನನ್ನು ಅವಮಾನಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.
” ಪಿಎಂ ಮೋದಿ ಯಾವುದೇ ರಚನಾತ್ಮಕ ಸಹಕಾರವನ್ನು ಬಯಸುತ್ತಿಲ್ಲ. ನಾವು ಮಾತಿಗೆ ಅವರು ಒಪ್ಪಿದರೆ, ನಾವು ಸ್ಪೀಕರ್ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದು ಹೇಳಿದ್ದೇವೆ” ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರಾಹುಲ್ ಗಾಂಧಿ ಹೇಳಿಕೆಯನ್ನು ಬೆಂಬಲಿಸಿದ್ದಾರೆ, ಅವರ ಪಕ್ಷದ ಅಭಿಪ್ರಾಯವೂ ಅದೇ ಆಗಿದೆ ಎಂದು ಹೇಳುವ ಮೂಲಕ ಉಪಸಭಾಪತಿಗೆ ಬೇಡಿಕೆ ಇಟ್ಟಿದ್ದಾರೆ.