ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಮನೆ ಕುಸಿತ, ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆ

Most read

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅನೇಕ ಕಡೆ ಮನೆಗಳು ಕುಸಿತವಾಗಿರುವ ಘಟನೆ ನಡೆದಿದೆ. ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬುವವರ ಮನೆ ಕುಸಿದ ಪರಿಣಾಮ ಅರ್ಧ ಮನೆ ಹಾನಿಗೊಂಡಿದೆ. ನಿದ್ರೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.

ಬನ್ನೂರು ಜೈನರಗುರಿ ನಿವಾಸಿಗಳಾದ ಮಜೀದ್ ಎಂಬವರ ಮನೆ ಕುಸಿದು, ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಕಣ್ಣಿನಡಿ ಸಿಲುಕಿಕೊಂಡಿದ್ದಾರೆ. ತಕ್ಷಣ ಮನೆಯಲ್ಲಿದ್ದ ಉಳಿದ ಸದಸ್ಯರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ  ತೆಗೆದು ಅಪಾಯವನ್ನು ತಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ , ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.

More articles

Latest article