ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತದೆ ಕುಮಾರಧಾರ ಸ್ನಾನಘಟ್ಟ

Most read

ದಕ್ಷಣಿ ಕನ್ನಡ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಜಿಲ್ಲೆಯಲ್ಲಿ ಹರಿಯುವ ನೇತ್ರಾವತಿ, ಕುಮಾರಧಾರ ನದಿಗಳು ಮೈದುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಹೆಚ್ಚುವರಿ ಮಳೆಯಾಗುತ್ತಿದ್ದು ಕುಮಾರಧಾರ ಸ್ನಾನಘಟ್ಟದಲ್ಲಿ ಅಪಾಯಮಟ್ಟ ಮೀರಿ ಹರಿಯುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡು ನದಿ ತೀರದಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ  ಕುಮಾರಧಾರದ ಉಪನದಿ ದರ್ಪಣತೀರ್ಥ ಕೂಡ ಅಪಾಯಘಟ್ಟ ಮೀರಿ ಹರಿದು ದರ್ಪಣತೀರ್ಥ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಸುಬ್ರಹ್ಮಣ್ಯ-ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕುಕ್ಕೆ ಕಾಡು ಪ್ರದೇಶವಾಗಿದ್ದು, ಅಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ.

ಭಾರೀ ಮಳೆಯಿಂದ ಕುಮಾರಧಾರ ಸ್ನಾನಘಟ್ಟವು ಮುಂಜಾನೆ ಮುಳುಗಡೆಗೊಂಡಿದೆ. ನಘಟ್ಟದಲ್ಲಿದ್ದ ಮೂಲಕ ದೇವರು ಕುಕ್ಕೆ ಸ್ವಾಮಿಯ ದೇವರ ಅವರಣ ಭಾಗಶ: ಮುಳುಗಡೆಗೊಂಡಿದೆ. ಮಳೆಯಿಂದಾಗಿ ಆಗಿರುವ ಸಮಸ್ಯೆಯಿಂದ ಭಕ್ತರು ಜಾಗರೂಕರಾಗಿರುವಂತೆ ಸೂಚನೆ ನೀಡಿ ಫಲಕಗಳನ್ನು ಹಾಕಲಾಗಿದೆ.


ದರ್ಪಣತೀರ್ಥ ಕೂಡ ಅಪಾಯಘಟ್ಟ ಮೀರಿ ಹರಿದು ದರ್ಪಣತೀರ್ಥ ಸೇತುವೆ ಮುಳುಗಡೆಗೊಂಡಿತ್ತು ಕೆಲವು ಗಂಟೆಗಳ ಕಾಲ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು ಈಗ ಅತೋಟಿಗೆ ಬಂದಿದೆ.

More articles

Latest article