ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್ ಹೊರಗಿನ ಮೇಲ್ಛಾವಣಿ ಕುಸಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿರುವ ಮೇಲ್ಛಾವಣಿ ಕುಸಿದಿದ್ದು, ಸಾವುನೋವುಗಳ ವರದಿಯಾಗಿಲ್ಲ.
ನೈಋತ್ಯ ಮಾನ್ಸೂನ್ ಕಾಲಿಡುತ್ತಿದ್ದಂತೆ ಗುಜರಾತ್‌ನಲ್ಲಿ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇದರ ನಡುವಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಏಳು ತಂಡಗಳನ್ನು ರಚಿಸಿ ಕಚ್, ರಾಜ್‌ಕೋಟ್, ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್, ಭಾವನಗರ, ನರ್ಮದಾ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.
ಶುಕ್ರವಾರ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿಯ ಒಂದು ಭಾಗವು ಕುಸಿದು 45 ವರ್ಷದ ಕ್ಯಾಬ್ ಚಾಲಕನ ಸಾವಿಗೀಡಾಗಿದ್ದರು. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡರು. ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ಮೃತರ ಕುಟುಂಬಕ್ಕೆ ₹ 20 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ.