ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಅಭ್ಯರ್ಥಿಯಾದರೆ ನನ್ನ ಬೆಂಬಲವಿರುತ್ತದೆ ಬೆಂಬಲ: ಸಿಪಿ ಯೋಗೇಶ್ವರ್

Most read

ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ ಸ್ಪಷ್ಟತೆ ನೀಡುವಂತೆ ಕುಮಾರಸ್ವಾಮಿ ಬಳಿ ಯೋಗೇಶ್ವರ್ ಕೇಳಿಕೊಂಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ‌ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಸಭೆ ನಡೆಸಿದ್ದು, ಈ ವೇಳೆ, ನೀವೇ ಮುಂದೆ ನಿಂತು ಉಪಚುನಾವಣೆಯನ್ನು ನಡೆಸಬೇಕು ಎಂದು ಕುಮಾರಸ್ವಾಮಿ ಬಳಿ ಯೋಗೇಶ್ವರ್ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಯನ್ನು ಬೇಗ ಘೋಷಿಸಿದರೆ ನಾವು ಸಿದ್ಧತೆ ಆರಂಭಿಸಬಹುದು ಎಂದು ಯೋಗೇಶ್ವರ್ ಹೇಳಿದ್ದಾರೆ. ಇದೇ ವೇಳೆ, ಈ ವಾರ ಬೆಂಗಳೂರಿಗೆ ಬರುತ್ತೇನೆ. ಮತ್ತೊಮ್ಮೆ ಚರ್ಚಿಸಿ ನಿರ್ಧರಿಸೋಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ರಾಮನಗರ ಜಿಲ್ಲೆಯಲ್ಲಿ ಇದ್ದ ಒಂದು ಕ್ಷೇತ್ರವನ್ನ ಜೆಡಿಎಸ್ ಕಳೆದುಕೊಳ್ಳಬೇಕಾಗುತ್ತದೆ.

More articles

Latest article