ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ

ಕೋಲಾರ (Kolar) ನಗರ ಹೊರವಲಯದ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಲೇಜಿನಲ್ಲಿದ್ದಾಗ ಹೊಟ್ಟೆ ನೋವೆಂದು ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಆಕೆಗೆ ತಾನು ಗರ್ಭಿಣಿ ಎನ್ನುವುದು ಕೂಡ ಗೊತ್ತೆ ಇರಲಿಲ್ಲ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

ಕಾಲೇಜಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಹುಡುಕಾಟ ನಡೆಸಿದಾಗ ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಎಂಬಾತ ಬಾಲಕಿ ಗರ್ಭಿಣಿ ಆಗಲು ಕಾರಣ ಎಂದು ತಿಳಿದುಬಂದಿದೆ. ಆತನನ್ನು ನಗರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೊಂದ ವಿಧ್ಯಾರ್ಥಿನಿ ಹೇಳಿಕೆ ಆಧರಿಸಿ ಕೋಲಾರ ಮಹಿಳಾ ಠಾಣೆಯಲ್ಲಿ ಪೋಕ್ಸೋ (POCSO) ಕೇಸ್ ದಾಖಲು ಮಾಡಲಾಗಿದೆ. ಸದ್ಯ ಪೊಲೀಸರು 22 ವರ್ಷದ ಮುಳಬಾಗಿಲು ನಿವಾಸಿ ಅನಿಲ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

More articles

Latest article

Most read