ಮುಡಾ ನಿವೇಶನ ಪ್ರಕರಣ | ನನ್ನ ಪಾತ್ರವಿಲ್ಲ, ತನಿಖಾ ವರದಿ ಬಂದ ನಂತರ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐ ಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಅವರು, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ ಎಂದು ಪ್ರಶ್ನಿಸಿದರು. ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

More articles

Latest article

Most read