ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ; ರಾಜ್ಯ ಸರ್ಕಾರ ಆದೇಶ

Most read

ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಂವಿಧಾನದ ಪಿತಾಮಹ, ಭಾರತ ರತ್ನ ಡಾ|| ಬಿ.ಆ‌ರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ. ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಆದೇಶದಲ್ಲಿ, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕ‌ರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

More articles

Latest article