ರಾಹುಲ್ ಗಾಂಧಿ ದೊಡ್ಡ ಹುಚ್ಚ, ಅವನ ಕೆನ್ನೆಗೆ ಬಾರಿಸಬೇಕು ಎಂದಿದ್ದ ಭರತ್ ಶೆಟ್ಟಿ ವಿರುದ್ಧ ದೂರು ದಾಖಲು

Most read

ರಾಹುಲ್ ಗಾಂಧಿ ಹುಚ್ಚನಂತೆ ಬೊಗಳುತ್ತಿದ್ದಾನೆ. ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಈಗ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ಗೆ ದೂರು ನೀಡಿದ್ದಾರೆ.

MLC ಐವನ್ ಡಿಸೋಜಾ ನೇತೃತ್ವದ ನಿಯೋಗ, ಇಂದು (ಜು.09) ಕಮಿಷನರ್ ಅವರನ್ನು ಭೇಟಿಯಾಗಿ ಭರತ್ ಶೆಟ್ಟಿ ವಿರುದ್ಧ FIR ದಾಖಲಿಸಿ ಬಂಧಿಸಲು ಒತ್ತಾಯಿಸಿದರು.

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಮಂಗಳೂರಿನಲ್ಲಿ ನಡೆದ ಬಿಜೆಪಿಯ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಮಾತನಾಡಿ, ರಾಹುಲ್ ಗಾಂಧಿಗೆ ಯಾರಾದ್ರೂ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನ್ನಿಸ್ತಿದೆ, ರಾಹುಲ್ ಗಾಂಧಿಯ ಕಪಾಳಕ್ಕೆ ಎರಡು ಬಾರಿಸದರೆ ಮಾತ್ರ ಆತ ಸರಿಯಾಗ್ತಾನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಶಿವನ ಫೋಟೋ ಹಿಡಿದು ನಿಂತಿದ್ದ, ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್ಲ. ಅವನು ಹಿಂದೂ ವಿರೋಧಿ ನೀತಿಯನ್ನ ಅಳವಡಿಸಿಕೊಂಡಿದ್ದಾನೆ. ನಾವು ಅವನಿಗೆ ಯಾವ ಶಬ್ದ ಪ್ರಯೋಗಿಸಬಹುದು ಎಂದು ಸಾಲು ಸಾಲು ವಿವಾದಾತ್ಮಕ ಹೇಳಿಕೆ ನೀಡಿದ್ದರು.

More articles

Latest article