ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ; ಸಿಎಂ ಸಿದ್ದರಾಮಯ್ಯ ಒಪ್ಪಿಗೆ

Most read

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಪ್ರಸ್ತಾವನೆ ಸಲ್ಲಿಸಿದ್ದಾರೆ.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,  ಮಾಜಿ ಸಂಸದ ಡಿಕೆ ಸುರೇಶ್‌ ಹಾಗೂ ಹಾಗೂ ಶಾಸಕ ಇಕ್ಬಾಲ್‌ ಹುಸೇನ್‌ ಸೇರಿದಂತೆ ಶಾಸಕರ ನಿಯೋಗವು ವಿಧಾನಸೌಧದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 


ಈ ವೇಳೆ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿ. ಈ ಮನವಿಗೆ ಸಿಎಂ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡಲಿದ್ದೇವೆ ಎಂಧು ತಿಳಿಸಿದ್ದಾರೆ.



More articles

Latest article