ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಗೆ ಭರಮಸಾಗರ- ಚಿತ್ರದುರ್ಗ ಮಧ್ಯದ ಕಾಮಗಾರಿ ಚಾಲನೆಗೆ ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.
ಭರಮಸಾಗರ-ಚಿತ್ರದುರ್ಗ ಮಧ್ಯದ ಸುಮಾರು 29 ಕಿಲೋ ಮೀಟರ್ ಉದ್ದದ ರೈಲ್ವೆ ಭೂಸ್ವಾಧೀನ ಪ್ರಕ್ರಿಯೆ ಶೇ.90ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಕೂಡ ಮಾಡಲಾಗಿದೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶೀಘ್ರ ರಾಜ್ಯದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮ ಆಯೋಜಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಲ್ಲಿನ ಭಾಗದ ಜನರ ಬಹು ನಿರೀಕ್ಷಿತ ಯೋಜನೆ ಇದಾಗಿದ್ದು, ಯೋಜನೆಗೆ ಚಿತ್ರದುರ್ಗ ಜಿಲ್ಲಾವ್ಯಾಪ್ತಿಯ ಒಟ್ಟು 1210 ಎಕರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ನೀಡಲಾಗಿದೆ. ಬಾಕಿಯಿರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.