ಕಾರವಾರ ಗುಡ್ಡ ಕುಸಿತ : ಒಂದೇ ಕುಟುಂಬದ ನಾಲ್ವರು ಸದಸ್ಯರು ಭೂ ಸಮಾಧಿ!

Most read

ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾ ನಾನ ದುರ್ಘಟನೆಗಳು ವರದಿಯಾಗುತ್ತಲೇ ಇದೆ. ಅದರಲ್ಲೂ ಭಾರೀ ಮಳೆಯಿಂದಾಗಿ ಆಗುತ್ತಿರುವ ಭೂಕುಸಿತಗಳಿಂದ ಉತ್ತರ ಕನ್ನಡ ಜಿಲ್ಲೆಯ ಜನರು ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದು ಕನಿಷ್ಠ 10 ಮಂದಿ ಬಲಿ ಆಗಿದ್ದಾರೆ. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿದ್ದಾರೆ ಎಂಬ ಸುದ್ದಿ ತಿಳಿದುಬಂದಿದೆ.

ಮೃತರನ್ನು ಲಕ್ಷ್ಮಣ ನಾಯ್ಕ್, ಶಾಂತಿ ನಾಯ್ಕ್, ರೋಶನ್, ಅವಂತಿಕಾ, ಜಗನ್ನಾಥ ಎಂದು ಗುರುತಿಸಲಾಗಿದೆ. ಜೀವನ ನಿರ್ವಹಣೆಗಾಗಿ ಕಾರವಾರದಿಂದ ಗಂಗಾವಳಿ ನದಿ ಬಳಿಯ ಶಿರೂರಿನಲ್ಲಿ ಟೀ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ್ ಮತ್ತವರ ಕುಟುಂಬ ಈಗ ಗುಡ್ಡ ಕುಸಿತಕ್ಕೆ ಬಲಿಯಾಗಿದೆ.

ಶಿರೂರು ಬಳಿ ಕೇಂದ್ರ IRB ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದು ಇದೇ ಕಾಮಗಾರಿ ನಡೆಯುವ ಸ್ಥಳದಲ್ಲೇ ಲಕ್ಷ್ಮಣ ನಾಯ್ಕ್ ಕುಟುಂಬ ಟೀ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಸತತ ಮಳೆಯಿಂದಾಗಿ ಗುಡ್ಡದಲ್ಲಿ ನೀರು ಹರಿದು ಗುಡ್ಡ ಕುಸಿತವಾಗಿ ಈ ಘಟನೆ ಸಂಭವಿಸಿದೆ.

ಇಡೀ ದಿನ ನಡೆದ ಕಾರ್ಯಚರಣೆಯಲ್ಲಿ 6 ಜನರ ಮೃತ ದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ. ಇನ್ನೂ 20 ಮಂದಿ ಕಣ್ಮರೆಯಾಗಿರುವ ಶಂಕೆ ಇದ್ದು, ಮಳೆ ನಡುವೆ ಎನ್‌ಡಿಆರ್‌ಎಫ್ ಶೋಧ ಕಾರ್ಯ ನಡೆಸುತ್ತಿದೆ.

More articles

Latest article