ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ ನಿಧನ

Most read

ಹೈಯರ್ ಎಜುಕೇಶನ್ (ಮಾಹೆ) ಯುನಿವರ್ಸಿಟಿಯ ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (90) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಡಿಸ್ಪೋಸಬಲ್ ಬ್ಲಡ್ ಬ್ಯಾಗ್ ಮತ್ತು ಟಿಲ್ಡಿಂಗ್ ಡಿಸ್ಕ್ ಹೃದಯ ಕವಾಟದಂತಹ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವ ಅವರ ಪಾತ್ರವನ್ನು ಭಾರತದ ವೈದ್ಯಕೀಯ ಸಾಧನಗಳ ಉದ್ಯಮಕ್ಕೆ ಅಡಿಪಾಯವನ್ನು ಹಾಕಿತ್ತು.

ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಪ್ರೊಫೆಸರ್ ಮಾರ್ತಾಂಡ ವರ್ಮ ಶಂಕರನ್ ವಲಿಯಾಥನ್ ಅವರು 1993 ರಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಯ ಮೊದಲ ಉಪಕುಲಪತಿಯಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿ ಶಿಕ್ಷಣ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸುವ ಮೂಲಕ ಮಾಹೆಯ ಹೆಸರನ್ನು ಉತ್ತುಂಗಕ್ಕೆ ಏರಿಸಿದ ಗರಿಮೆ ಇವರದ್ದು.

ತಿರುವನಂತಪುರದ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದ ಡಾ.ವಲಿಯತ್ತನ್ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್ಬರ್ಗ್, ಇಂಗ್ಲೆಂಡ್ ಮತ್ತು ಕೆನಡಾದಿಂದ ಫೆಲೋಶಿಪ್ ಪಡೆದಿದ್ದರು. ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್ ಸಂಸ್ಥೆಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಲಿಯಥಾನ್ ಅವರು ಇಪ್ಪತ್ತು ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸೆಯ ಪ್ರಾಧ್ಯಾಪಕರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.

ಡಾ.ವಲಿಯತ್ತನ್ ಅವರಿಗೆ 2005ರಲ್ಲಿ ಪದ್ಮವಿಭೂಷಣ , 2002ರಲ್ಲಿ ಪದ್ಮಶ್ರೀ, ಡಾ. ಬಿ. ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ ಮತ್ತು ಇನ್ನು ಹತ್ತು ಹಲವು ವಿದೇಶಿ ಪ್ರಶಸ್ತಿಗಳು ಸಹ ಸಂದಿದೆ.

More articles

Latest article