ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇದೀಗ ಕಾವೇರಿ ನದಿಯಲ್ಲಿ ಮತ್ತೆ ಪ್ರವಾಹ ಆತಂಕ ಎದುರಾಗಿದೆ.
ಡ್ಯಾಂ ನಿಂದ ನದಿಗೆ 1 ಲಕ್ಷ ರಿಂದ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಪ್ರವಾಹ ಎಚ್ಚರಿಕೆ ಬಗ್ಗೆ ತುರ್ತು ಸಂದೇಶ ರವಾನಿಸಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
124.80 ಗರಿಷ್ಠ ಸಾಮರ್ಥ್ಯದ ಕೆಆರ್ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಸಂಪೂರ್ಣವಾಗಿ ಭರ್ತಿಯಾಗಿದೆ. 1 ಕಡೆ ಕಾವೇರಿ ಒಡಲು ಭರ್ತಿಯಾಗಿರೋದು ಸಂತಸದ ವಿಚಾರ, ಇನ್ನೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.
ಕೆ.ಆರ್.ಎಸ್ ನಿಂದ ಒಂದು ಲಕ್ಷ ಕ್ಕಿಂತ ಹೆಚ್ಚಿನ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನದಿ ಪಾತ್ರದಲ್ಲಿರುವ ಶ್ರೀರಂಗಪಟ್ಟಣ, ಪಾಂಡವಪುರ, ಮಳವಳ್ಳಿ ಮತ್ತು ಕೆ.ಆರ್.ಪೇಟೆ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗಬಹುದು.