ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಘಾಟ್‌ ಬಳಿ ಭೂಕುಸಿತ; ರೈಲು ಸಂಚಾರದಲ್ಲಿ ವ್ಯತ್ಯಯ

Most read

ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ ಕೆಲವು ರೈಲುಗಳ ಸಂಚಾರ ರದ್ದುಗೊಂಡಿದ್ದು, ಇನ್ನು ಕೆಲವನ್ನು ಬದಲಿ ಮಾರ್ಗದಲ್ಲಿ ಚಲಿಸಲು ವ್ಯವಸ್ತೆ ಮಾಡಲಾಗಿದೆ.

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಈಗ ಇದೇ ಮೊದಲು ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿ ರೈಲುಗಳು ಬದಲಿಮಾರ್ಗ ಮತ್ತು ರದ್ದು ಪಡಿಸಬೇಕಾದ ಪರಿಸ್ಥಿತಿ ಉದ್ಭವಿಸಿದೆ.

ಕಾರವಾರದಿಂದ ನಿನ್ನೆ ಹೊರಡಬೇಕಾಗಿದ್ದ ರೈಲು ಸಂಖ್ಯೆ 06568 ಕಾರವಾರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಿನ್ನೆ ರದ್ದುಗೊಳಿಸಲಾಗಿದೆ.

ಬೆಂಗಳೂರಿನಿಂದ ನಿನ್ನೆ ಹೊರಟ ರೈಲು ಸಂಖ್ಯೆ 16595 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕುಣಿಗಲ್,ಪಡೀಲು ಬೈಪಾಸ್ ಬದಲು ಯಶವಂತಪುರ, ಬಾಣಸವಾಡಿ, ಜೋಲಾರ್‌ಪೇಟೆ ಕ್ಯಾಬಿನ್, ಸೇಲಂ, ಪೊದನೂರು, ಶೋರನೂರು, ಮಂಗಳೂರು ಜಂಕ್ಷನ್, ಸುರತ್ಕಲ್‌ ಮೂಲಕ ಸಂಚರಿಸಿದೆ.

ಇನ್ನೊಂದೆಡೆ, ಮಂಗಳೂರಿನಿಂದ ನಿನ್ನೆ ಹೊರಟ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ – ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆ ಆಗಿದ್ದು, ಹಾಸನದ ಬದಲು ಸುಬ್ರಹ್ಮಣ್ಯ ರಸ್ತೆ, ಪಡೀಲ್, ಸುರತ್ಕಲ್, ಕಾರವಾರ, ಮಡಗಾಂವ್, ಕೂಲಂ, ಕ್ಯಾಸ್ಟಲ್ ರಾಕ್, ಲೊಂಡಾ, ಶ್ರೀ ಸಿದ್ಧರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮೂಲಕ ಸಂಚರಿಸಿದೆ.

ಮುರುಡೇಶ್ವರದಿಂದ ನಿನ್ನೆ ಹೊರಟ ರೈಲು ಸಂಖ್ಯೆ 16586 ಮುರಡೇಶ್ವರ–ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆಗೊಂಡು ಹಾಸನ,ಮೈಸೂರು ಮಾರ್ಗದ ಬದಲು ಮಂಗಳೂರು ಜಂಕ್ಷನ್, ಶೋರನೂರು, ಸೇಲಂ, ಜೋಲಾರ್‌ಪೇಟೆ ಕ್ಯಾಬಿನ್ ಮೂಲಕ ಸಂಚರಿಸಿದೆ.

ಕಣ್ಣೂರಿನಿಂದ ನಿನ್ನೆ ಹೊರಟ ರೈಲು ಸಂಖ್ಯೆ 16512 ಕಣ್ಣೂರು–ಕ್ರಾ.ಸಂ.ರಾ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕುಣಿಗಲ್ ಬದಲು ಮಂಗಳೂರು ಸೆಂಟ್ರಲ್, ಶೋರನೂರು, ಸೇಲಂ, ಜೋಲಾರ್ಪೇಟೆ ಕ್ಯಾಬಿನ್ ಮೂಲಕ ಪ್ರಯಾಣಿಸಿದೆ.

ಕಾರವಾರದಿಂದ ನಿನ್ನೆ ಹೊರಟ ರೈಲು ಸಂಖ್ಯೆ 16596 ಕಾರವಾರ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ ಪಡೀಲು ಬೈಪಾಸ್ ಬದಲು ಮಂಗಳೂರು ಜಂಕ್ಷನ್, ಶೋರನೂರು, ಸೇಲಂ, ಜೋಲಾರ್ಪೇಟೆ ಕ್ಯಾಬಿನ್ ಮೂಲಕ ಸಂಚರಿಸಿದೆ.

ಹೀಗೆ ಸುಮಾರು ರೈಲುಗಳು ಬದಲಿ ಇಮಾರ್ಗದಿಂದ ಸಂಚರಿಸಿದರೆ ಕೆಲವನ್ನು ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

More articles

Latest article