ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಕಾರ್ಯಚರಣೆ ಮುಂದುವರೆದಿದೆ.
ಇದೇ ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದರು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಮುನ್ನೆಚ್ಚರಿಕೆಯಾಗಿ ಸಂಚಾರವನ್ನು ನಿಷೇಧಿಸಲಾಗಿದೆ.