ವಯನಾಡ್ ಭೂಕುಸಿತ: 64 ಮಂದಿ ಸಾವು, ಹಳ್ಳಿಗೆ ಹಳ್ಳಿಗಳೇ ನೆಲಸಮ, ನೂರಾರು ಮಂದಿ ಸಿಲುಕಿರುವ ಭೀತಿ

Most read

ಭಾರೀ ಮಳೆಯ ಕಾರಣ ಮಂಗಳವಾರ ಬೆಳಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಭೂಕುಸಿತದಲ್ಲಿ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ. ಮೂರಕ್ಕೂ ಹೆಚ್ಚು ಹಳ್ಳಿಗಳು ಕೊಚ್ಚಿ ಹೋಗಿದ್ದು, ನೂರಾರು ಜನರು ಸಿಲುಕಿರುವ ಶಂಕೆ ಇದೆ.

ಘಟನಾ ಸ್ತಲಕ್ಕೆ ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್‌ಗಳು ಮತ್ತು ಇತರ ರಕ್ಷಣಾ ತಂಡಗಳು ಬಂದಿದ್ದು, ಹೆಚ್ಚು ಹಾನಿಗೊಳಗಾದ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ತೆರಳಿ ಕಾರ್ಯಚರಣೆ ನಡೆಸುತ್ತಿದೆ. ಘಟನಾ ಸ್ಥಳದಲ್ಲಿ ವೈದ್ಯಕೀಯ ತಂಡಗಳು ಸೇರಿದಂತೆ 225 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 50,000 ರೂಪಾಯಿ ಘೋಷಿಸಿದೆ.

ಪ್ರವಾಹದಲ್ಲಿ ಕೊಚ್ಚಿಹೋದ ವಾಹನಗಳು ಮರಗಳ ಬುಡದಲ್ಲಿ ಸಿಲುಕಿಕೊಂಡಿರುವುದು ಕಂಡು ಬಂದಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ಅನ್ನು ಸಹ ನೀಡಲಾಗಿದೆ.

More articles

Latest article