ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಆಡಿ ಕಾರು: ಮೂವರು ವಿದ್ಯಾರ್ಥಿಗಳ ದುರ್ಮರಣ

ಕೋಲಾರ: ಆಡಿ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ವಿದ್ಯಾರ್ಥಿಗಳ ದಾರುಣವಾಗಿ ಸಾವನ್ನಪ್ಪಿ ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಂಭವಿಸಿದೆ.

ಮುಂಜಾನೆ ಹೊರವಲಯದ ಸಹಕಾರ ನಗರ ಬಳಿ ಈ ದುರ್ಘಟನೆ ನಡೆದಿದ್ದು, ಹಾಸನದ ಹರ್ಷವರ್ಧನ್, ಬಳ್ಳಾರಿಯ ಬಸವರಾಜ್‌ ಹಾಗೂ ಬಂಗಾರಪೇಟೆಯ ನಿಶ್ಚಲ್ ಸಾವನ್ನಪ್ಪಿದ ದುರ್ದೈವಿ ವಿದ್ಯಾರ್ಥಿಗಳಾಗಿದ್ದಾರೆ.

ಬಂಗಾರಪೇಟೆಯ ಸಾಯಿ ಗಗನ್ ಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇವರೆಲ್ಲರೂ ಬೆಂಗಳೂರಿನ ರೇವಾ ಯುನಿವರ್ಸಿಟಿಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಮುಂಜಾನೆ ಸುಮಾರು ಎರಡು ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

More articles

Latest article

Most read