ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾಗೆ ಕೊನೆಗೂ ಜಾಮೀನು ಮಂಜೂರು ಮಾಡಿದ ಸುಪ್ರೀಂ

Most read

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಲುಕಿದ್ದ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ಆಪಾದಿತ ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ ಬರೋಬ್ಬರಿ 18 ತಿಂಗಳ ನಂತರ ಅವರಿಗೆ ಜಾಮೀನು ಸಿಕ್ಕಿದೆ.

ವಿಚಾರಣೆಯನ್ನು ಕೈಗೆತ್ತುಕೊಂಡ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರು, ವಿಚಾರಣೆಯಿಲ್ಲದೆ ಅನಿಯಮಿತ ಅವಧಿಗೆ ಮನೀಶ್‌ರನ್ನು ಜೈಲಿನಲ್ಲಿಡುವುದು ಆತನ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದೂ ಅವರು ಹೇಳಿದ್ದಾರೆ.

18 ತಿಂಗಳ ಸೆರೆವಾಸದಲ್ಲಿದ್ದರು ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ ಮತ್ತು ಮನೀಶ್‌ ತ್ವರಿತ ವಿಚಾರಣೆಯ ಹಕ್ಕಿನಿಂದ ವಂಚಿತರಾಗಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಅವರು ಕೆಳ ನ್ಯಾಯಾಲಯಗಳ ಪ್ರಶ್ನೆಗಳನ್ನು ಕೇಳಿದರು.

More articles

Latest article