ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ, ಚರ್ಚೆ ಕೂಡ ಆಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ, ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಬೆಂಗಳೂರಿನ ತಮ್ಮ ನಿವಾಸದ ಮುಂದೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಆದರೆ ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎನ್ನುವುದನ್ನು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.‌13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಹೇಳಿದ್ದಾರೆ.

More articles

Latest article

Most read