ದರ್ಶನ್ ಅಂಡ್‌ ಗ್ಯಾಂಗ್‌ಗೆ ಜೈಲೇ ಗತಿ: ಆಗಸ್ಟ್​ 28ರವರೆಗೆ ಜೈಲುವಾಸ ವಿಸ್ತರಣೆ

Most read

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್​ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್​ 28ರವರೆಗೂ ವಿಸ್ತರಿಸಿ ಆದೇಶಿಸಿತು.

ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು.

More articles

Latest article