ಸಕಲೇಶಪುರ ತಾಲ್ಲೂಕಿನಲ್ಲಿ ವರುಣನ ಆರ್ಭಟ: ರಸ್ತೆಗಳು ಮುಳುಗಡೆ, ಜನಜೀವನ ಅಸ್ತವ್ಯಸ್ತ!

ಸಕಲೇಶಪುರ ತಾಲ್ಲೂಕಿನಾಧ್ಯಂತ ಬುಧವಾರ ಧಾರಾಕಾರವಾಗಿ ಮಳೆಯಾಗಿದ್ದು, ನಗರದ ಜನರ ಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಜಿಲ್ಲೆಯ ಜೀವ ನದಿ ಹೇಮಾವತಿ ಒಳ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.

ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಸಕಲೇಶಪುರದ ಅಜಾದ್ ರಸ್ತೆ, ಬಿಎಂ ರಸ್ತೆ ಮಳೆ ನೀರಿನಿಂದ ಸಂಪೂರ್ಣ ಜಲಾವೃತವಾಗಿದೆ. ಕೆರೆಯಂತಾದ ರಸ್ತೆಗಳಲ್ಲಿ ವಾಹನ ಸವಾರರು ಪರದಾಡಿದ್ದಾರೆ.

ಅಜಾದ್ ರಸ್ತೆಯಲ್ಲಿ ಸುಮಾರು 5ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿದೆ. ನೀರಿನಲ್ಲಿ ಅಂಗಡಿ ವಸ್ತುಗಳು ತೇಲಿ ಹೋಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

More articles

Latest article

Most read