ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಟಿ. ಜೆ. ಅಬ್ರಾಹಂ ಎಂಬುವವರು ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿಯನ್ನು ಕೇಳಿದ್ದರು. ಶನಿವಾರ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಡತವನ್ನು ರಾಜ್ಯಪಾಲರ ಕಛೇರಿಯಿಂದ ಕಳಿಸಲಾಗಿದೆ. ಅಲ್ಲದೇ ದೂರುದಾರ ಟಿ. ಜೆ. ಅಬ್ರಾಹಂಗೆ ರಾಜಭವನಕ್ಕೆ ಮತ್ತಷ್ಟು ದಾಖಲೆಗಳ ಜೊತೆ ಬರುವಂತೆ ದೂರವಾಣಿ ಕರೆ ಮಾಡಲಾಗಿದೆ.
‘ನನ್ನ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ರಾಜಭವನಕ್ಕೆ ಬರಲು ರಾಜ್ಯಪಾಲರು ನನಗೆ ಸೂಚನೆ ನೀಡಿದ್ದಾರೆ. ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿಯಾಗಲಿದ್ದೇನೆ’ ಎಂದು ಅಬ್ರಾಹಂ ಇಂದು ಮಾಧ್ಯಮಗಳ ಜೊತೆ ಹೇಳಿಕೊಂಡಿದ್ದಾರೆ.