ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆ ಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು.
ವಿಧಾನ ಸೌಧ ದ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್ ಅವರ ಕಚೇರಿಯಲ್ಲಿ ನಡೆದ ಸಭೆ ಯಲ್ಲಿ, ರಾಜೀವ್ ಗಾಂಧಿ ವಸತಿ ನಿಗಮದಿಂದ ಎ ಎಚ್ ಪಿ ಯೋಜನೆಯಡಿ ಕೈಗೊಂಡಿರುವ 47, 887 ಮನೆ ನಿರ್ಮಾಣ ಕ್ಕೆ ಫಲಾನುಭವಿಗಳ ವಂತಿಗೆ ಹಾಗೂ ಮೂಲ ಸೌಕರ್ಯ ಮೊತ್ತ 2213 ಕೋಟಿ ರೂ. ಸರ್ಕಾರವೇ ಭರಿಸುವ ಸಂಬಂಧ ತಾತ್ವಿಕ ಒಪ್ಪಿಗೆ ದೊರೆತಿರುವ ಹಿನ್ನೆಲೆ ಯಲ್ಲಿ ಸಂಪುಟ ದ ಮುಂದೆ ತರಲು ನಿರ್ಧಾರಿಸಲಾಯಿತು.
ಅದೇ ರೀತಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎ ಎಚ್ ಪಿ ಯೋಜನೆಯಡಿಯಲ್ಲಿ ನಿರ್ಮಾಣ ಮಾಡುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ ಮುಂದಿನ ತಿಂಗಳು 32, 946 ಮನೆ ಹಂಚಿಕೆ ಮಾಡಲು ತೀರ್ಮಾನಿಸಿದ್ದು ಅದಕ್ಕೆ ಫಲಾನುಭ ವಿಗಳ ವಂತಿಗೆ ಹಾಗೂ ಮೂಲ ಸೌಕರ್ಯ ಮೊತ್ತ ಸೇರಿ 862 ಕೋಟಿ ರೂ. ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೋರಲಾಯಿತು.
ಮೊದಲ ಹಂತದಲ್ಲಿ ಹಂಚಿಕೆ ಮಾಡಿರುವ 36,784 ಮನೆಗಳಿಗೆ ಸಂಬಂಧಿಸಿದಂತೆ 500 ಕೋಟಿ ರೂ. ಬಾಕಿ ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡಲಾಯಿತು.
ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇ ಗೌಡ, ಆಯುಕ್ತ ಕವಿತಾ ಮನ್ನಿಕೇರಿ, ಚೀಫ್ ಇಂಜಿನಿಯರ್ ರವಿಕುಮಾರ್, ಕೆ ಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಎಂ ಡಿ ನಜೀರ್, ನಿರ್ದೇಶಕ ಜಿಲಾನಿ ಮೊಕಾಶಿ, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಅಶೋಕ್, ಚೀಫ್ ಇಂಜಿನಿಯರ್ ಬಾಲರಾಜು, ರಾಜೀವ್ ಗಾಂಧಿ ವಸತಿ ನಿಗಮ ಎಂ ಡಿ ಸುಶೀಲಮ್ಮ ಉಪಸ್ಥಿತರಿದ್ದರು.