ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಗುರುವಾರ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪರ ನಿಲ್ಲುವ ಬಗ್ಗೆ ಒಕ್ಕೊರಲ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವರು ಸಿಎಂ ಸಿದ್ದರಾಮಯ್ಯ ಅವರ ಪರ ನಿಂತಿದ್ದು, ಇದೀಗ ಶಾಸಕರೂ ನಿಲ್ಲುವ ಸಾಧ್ಯತೆಗಳಿವೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಸಂಜೆ 4 ಗಂಟೆಗೆ ಸಿಎಲ್’ಪಿ ಸಭೆ ನಡೆಯಲಿದೆ. ಈಗಾಗಲೇ ಈ ಸಂಬಂಧ ಪಕ್ಷದ ಎಲ್ಲಾ ಶಾಸಕರಿಗಳಿಗೂ ಸಿಎಲ್’ಪಿ ಕಾರ್ಯರ್ಶಿಯು ಮಾಹಿತಿ ರವಾನಿಸಿದ್ದು, ತಪ್ಪದೆ ಹಾಜರಾಗುವಂತೆ ಸೂಚಿಸಿದ್ದಾರೆ.