ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲು : ಯಾವ ಕಾರಣಕ್ಕೆ ಗೊತ್ತೇ?

Most read

ಮುಡಾ ಬದಲಿ ನಿವೇಶ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ, ಕೊಂಚ ರಿಲೀಫ್ ನಲ್ಲಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಜಿಲ್ಲಾ ಪಂಚಾಯತ್ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ​ ಮತ್ತು ತಾಲೂಕು ಪಂಚಾಯತ್​ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಸದಸ್ಯ ಅರುಣ್​ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಬಾಕಿ ಉಳಿದಿದ್ದ 1494 ಕೋಟಿ ರೂ. ಹಣ ಎಲ್ಲಿದೆ, ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಇನ್ನಷ್ಟು ಮಾಹಿತಿ ಅಪ್ಡೇಟ್ ಆಗಲಿದೆ…

More articles

Latest article