ರಾಜ್ಯದಲ್ಲಿ ಇಂದಿನಿಂದ ಮದ್ಯದ ದರ ಇಳಿಕೆ!

Most read

ರಾಜ್ಯದಲ್ಲಿ ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸವಾಗಲಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.

ಇದೀಗ ಅಂತಿಮ ಅಧಿಸೂಚನೆಯಂತೆ ಸ್ಲ್ಯಾಬ್‌ಗಳ (Slab) ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಆದರೆ ಮೊದಲ ಮೂರು ಸ್ಲ್ಯಾಬ್ ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲ್ಯಾಬ್‌ವರೆಗೆ ದರ ಕಡಿಮೆಯಾಗಲಿದೆ. ಆ ಸ್ಲ್ಯಾಬ್ ಗಳಲ್ಲಿನ ವಿಸ್ಕಿ, ರಮ್, ಬ್ರಾಂಡಿಗಳ ಬೆಲೆ ಸಹಜವಾಗಿಯೇ ಕಡಿಮೆಯಾಗಲಿದೆ.

ಪರಿಷ್ಕೃತ ದರದಂತೆ ಮದ್ಯದ ಸ್ಲ್ಯಾಬ್ ವಾರು ದರವನ್ನು ಪರಿಷ್ಕರಿಸಿರುವ ಸರ್ಕಾರ ಪ್ರಸ್ತುತ ಇದ್ದ 18 ಸ್ಲ್ಯಾಬ್​ಗಳಲ್ಲಿ ವಿಧಿಸಲಾಗುತ್ತಿದ್ದ ಅಬಕಾರಿ ಸುಂಕವನ್ನು 16 ಸ್ಲ್ಯಾಬ್​ಗಳಿಗೆ ಇಳಿಕೆ ಮಾಡಿದೆ. ಅದಕ್ಕನುಗಣವಾಗಿ ಅಬಕಾರಿ ಸುಂಕವನ್ನು ಪರಿಷ್ಕರಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಪ್ರೀಮಿಯಂ ಮದ್ಯಗಳ ಬ್ರ್ಯಾಂಡ್ ದರ ಕಡಿಮೆ ಮಾಡುವುದರೊಂದಿಗೆ ಗಡಿಯಾಚೆಗಿನ ಮದ್ಯದ ಖರೀದಿಯನ್ನು ತಡೆಯಲು ಮಾತ್ರವಲ್ಲದೆ ಸ್ಥಳೀಯ ಮಾರಾಟವನ್ನು ಹೆಚ್ಚಿಸುವ ಮೂಲಕ ರಾಜ್ಯದ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

More articles

Latest article