ಯತ್ನಾಳ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಿದ ಕೋರ್ಟ್

ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ದೇಶಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಏಪ್ರಿಲ್ ಯತ್ನಾಳ್, “ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ, ಅರ್ಧ ಪಾಕಿಸ್ತಾನವಿದೆ. ಅವರಿಗೆ ದೇಶವಿರೋಧಿ ಹೇಳಿಕೆ ನೀಡುವ ಚಟ” ಎಂದು ನಾಲಿಗೆ ಹರಿಬಿಟ್ಟಿದ್ದರು.

ಈ ವಿಷಯದಿಂದ ನೊಂದ ತಬಸುಮ್ ರಾವ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿ ಹಲವು ಸಾಕ್ಷಿಗಳನ್ನು ಕೋರ್ಟ್ ಗೆ ನೀಡಿದ್ದರು. ಇದನ್ನು ಪರಿಗಣಿಸಿರುವ ನ್ಯಾಯಾಲಯ ಯತ್ನಾಳ್ ಗೆ ಸಮನ್ಸ್ ಜಾರಿಗೊಳಿಸಿದೆ. ಅರ್ಜಿದಾರ ಪರ ಸೂರ್ಯ ಮುಕುಂದರಾಜ್ , ಸಂಜಯ್ ವಕಾಲತ್ತು ವಹಿಸಿದ್ದರು.

More articles

Latest article

Most read