ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.

ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಸುಧಾಕರ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು .

ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

More articles

Latest article

Most read