ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಇರುವ ಬಗ್ಗೆ ನ್ಯಾಯಮೂರ್ತಿ ಹೇಮಾ ಕಮಿಟಿ ವರದಿ ಮಾಡಿತ್ತು. ಅಲ್ಲಿಂದ ಮಲಯಾಳಂ ಚಿತ್ರರಂಗದಲ್ಲಿ ದಿಗ್ಗಜರ ಹೆಸರುಗಳು ಕೂಡ ಆಚೆ ಬಂದಿದ್ದವು. ಈಗ ಇದೇ ರೀತಿ ಕಮಿಟಿ ರಚನೆಯಾಗಬೇಕು ಅಂತ ಕರ್ನಾಟಕ ಚಿತ್ರರಂಗ ಹಲವು ನಟ ನಟಿಯರು ಫೈರ್ ಸಂಸ್ಥೆ ಮೂಲಕ ರಾಜ್ಯ ಸರ್ಕಾರಕ್ಕೆ 153 ವ್ಯಕ್ತಿಗಳು ಸಹಿ ಮಾಡಿ ಮನವಿ ಸಲ್ಲಿಸಿದೆ.
ಕೆಲವು ದಿನಗಳ ಹಿಂದಷ್ಟೇ ತೆಲುಗು ಚಿತ್ರರಂಗದಲ್ಲೂ ಮಹಿಳೆಯ ಮೇಲಿನ ಲೈಂಗಿಕ ಕಿರುಕುಳ ಹಾಗೂ ಇತರೆ ಸಮಸ್ಯೆಗಳನ್ನು ಅಧ್ಯಯನ ಆಗಬೇಕು ಎಂದು ಸಮಂತಾ ಹಾಗೂ ಟಾಲಿವುಡ್ನ ಹಲವು ಸೆಲಬ್ರಿಟಿಗಳು ತೆಲಂಗಾಣ ಸರ್ಕಾರಕ್ಕೆ ಒತ್ತಡ ಹಾಕಿದ್ದರು. ಈಗ ಕನ್ನಡ ಚಿತ್ರರಂಗದಲ್ಲೂ ಅದೇ ಕೂಗು ಕೇಳಿ ಬರುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳೆಯರ ಸಮಸ್ಯೆಗಳಿಗಾಗಿ ಈ ಹಿಂದೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ರಚನೆ ಮಾಡಲಾಗಿತ್ತು. ಇದರಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ನಿರ್ದೇಶಕ ಕವಿತಾ ಲಂಕೇಶ್ ಅಂತಹ ದಿಗ್ಗಜರು ಇದ್ದಾರೆ. ಅದೇ ಫೈರ್ ಈಗ ನಿವೃತ್ತ ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಕರ್ನಾಟಕ ಸರ್ಕಾರಕ್ಕೆ ಕರೆ ನೀಡಿದೆ.
ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಕರ್ನಾಟಕ ಸರ್ಕಾರಕ್ಕೆ ಕರೆ ನೀಡಿದೆ. ಲಿಂಗ ನ್ಯಾಯವನ್ನು ಪ್ರತಿಪಾದಿಸುವ ಕನ್ನಡ ಚಲನಚಿತ್ರೋದ್ಯಮದ ಮತ್ತು ವಿವಿಧ ಕ್ಷೇತ್ರಗಳ 153 ವ್ಯಕ್ತಿಗಳು ಈ ಅರ್ಜಿಗೆ ಸಹಿ ಹಾಕಿದ್ದಾರೆ. ನಾವು ಈ ಸಂದೇಶದೊಂದಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಅರ್ಜಿಗಳನ್ನು ಒದಗಿಸಿದ್ದೇವೆ ಮತ್ತು ಈ ಉದ್ದೇಶಕ್ಕಾಗಿ ಮಾಧ್ಯಮದ ಸದಸ್ಯರು ನಮ್ಮನ್ನು ಬೆಂಬಲಿಸಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಫೈರ್ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.
ಫೈರ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಎರಡು ಬೇಡಿಕೆಗಳನ್ನು ಇಡಲಾಗಿದೆ. ಮೊದಲನೆಯದ್ದು ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನಿವೃತ್ತ ನ್ಯಾಯಾಧೀಶರ ಕಮಿಟಿ ರಚಿಸಿ, ವ್ಯವಸ್ಥಿತವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದೆ. ಇನ್ನೊಂದು ಕಡೆ ಮಹಿಳೆಯರು ಕನ್ನಡ ಚಿತ್ರರಂಗದಲ್ಲಿ ಆರೋಗ್ಯಕರವಾಗಿ ಹಾಗೂ ಸಮಾನವಾಗಿ ಕೆಲಸ ಮಾಡುವಂತೆ ನಿಯಮಗಳನ್ನು ತರುವಂತೆ ಕೇಳಿಕೊಂಡಿದೆ.
ಕನ್ನಡ ಚಿತ್ರರಂಗದ ಪ್ರಮುಖರು ಈ ಅರ್ಜಿಗೆ ಸಹಿ ಹಾಕಿದ್ದಾರೆ. ಫೈರ್ನ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾರಿಂದ ಹಿಡಿದು ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್ಕುಮಾರ್, ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕಿದ್ದಾರೆ.
ಅದರ ಪ್ರತಿ ಇಲ್ಲಿದೆ…