ಶೂಟಿಂಗ್‌ ವೇಳೆ ಲೈಟ್ ಬಾಯ್ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR

ಸಿನಿಮಾ ಚಿತ್ರೀಕರಣ ಸೆಟ್ ನಲ್ಲಿ ಲೈಟ್‌ ಬಾಯ್ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಚಿತ್ರದ ಶೂಟಿಂಗ್ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೋಹನ್‌ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೋಹನ್ ಗುರುವಾರ (ಸೆ.5) ಸಾವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳದ ಕಾರಣ ಯೋಗರಾಜ್ ಭಟ್, ಪ್ರೊಡಕ್ಷನ್ ಮ್ಯಾನೇಜ‌ರ್ ಸುರೇಶ್ ಸೇರಿ ಮೂವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

More articles

Latest article

Most read