ಹಾಸನದ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ಹಿಂಡು: ಜನರಲ್ಲಿ ಆತಂಕ

Most read

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ತಾವರೆಕೆರೆ ಬಳಿ 20ಕ್ಕೂ ಹೆಚ್ಚು ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಬೆಳ್ಳಂಬೆಳಿಗ್ಗೆ ಕೆರೆಯ ನೀರಲ್ಲಿ ಈಜಾಡಿ ನಂತರ ಕಾಫಿತೋಟಕ್ಕೆ ಬಂದಿವೆ. ಇದರಿಂದ ಕಾಫಿ ತೋಟ ನಾಶವಾಗಿದೆ.

ಕಾಫಿತೋಟದಲ್ಲಿ ಆನೆ ಓಡಾಟದಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇದರಿಂದ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ರೈತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

More articles

Latest article