ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಸ್ಟರ್‌ ಮೈಂಡ್‌ ನಾಗೇಂದ್ರ ಸೇರಿ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

Most read

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಎಳೆಎಳೆಯಾಗಿ ಬರೆದಿದ್ದಾರೆ. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಿದೆ.

ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಣತಿಯಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದೆ. 

More articles

Latest article