ಚಾಮುಂಡಿ ಬೆಟ್ಟ ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಮುಸ್ಲಿಂ ಅಂಗಡಿಗಳು ಯಾಕೆ ಇಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ದೇವಿಕೆರೆ ಮೇಲೆ ನಮಾಜ್ ಮಾಡುತ್ತಿದ್ದರು. ಚಾಮುಂಡಿ ಬೆಟ್ಟದಲ್ಲಿ 12 ಮುಸ್ಲಿಂ ಅಂಗಡಿಗಳು ಇತ್ತು. ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಇವರು ಯಾಕೆ ಅಂಗಡಿ ಇಡಬೇಕು. ಮುಜರಾಯಿ ಕಾನೂನಿನಲ್ಲಿ ಕೂಡ ಇದಕ್ಕೆ ಅವಕಾಶ ಇಲ್ಲ ಎಂದು ಮುಸ್ಲಿಂ ಅಂಗಡಿಗಳನ್ನು ತೆಗೆಸಿದ್ದೆ ಎಂದು ಹೇಳಿದ್ದಾರೆ.
ಮಹಿಶಾ ದಸರಾ ಬಗ್ಗೆ ಮಾತನಾಡಿದ ಅವರು, ಚಾಮುಂಡೇಶ್ವರಿಗೆ ಅವಮಾನದ ರೀತಿಯಲ್ಲಿದ್ದ ಮಹಿಷ ದಸರಾ ತಡೆಯೊ ಕೆಲಸ ಮಾಡಿದೆ. ಅವತ್ತು ಚಾಮುಂಡೇಶ್ವರಿ ತಾಯಿಗೆ ಅನ್ಯಾಯ ಆಗುವಾಗ ಮಾತನಾಡಿಲ್ಲ. ಇಂದು ಬೇರೆ ಬೇರೆ ಕಾರಣಕ್ಕೆ ನನ್ ವಿವಾದ ಮಾಡ್ತಾರೆ ಎಂದು ಹೇಳಿದ್ದಾರೆ.
ಚಾಮುಂಡಿ ಬೆಟ್ಟ ಪ್ರಾಧಿಕಾರದ ಬಗ್ಗೆ ಮಾತನಾಡಿದ ಅವರು, ಪ್ರಾಧಿಕಾರದ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಚಾಮುಂಡಿ ಬೆಟ್ಟ ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಆಗಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಹೇಳಿದ್ದಾರೆ.
ಮುಂದುವರೆದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಒಡೆದಾಟದ ಬಗ್ಗೆ ಮಾತನಾಡಲ್ಲ ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.
ಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು.? ನಾನು ಹೇಳಿದ್ರೆ ವಿವಾದ ಆಗುತ್ತೆ. ಪೈಪ್ ಲೈನ್ ಎಲ್ಲಿ ತಡೆದು ನಿಲ್ಲಿಸಿದ್ದಾರೆ ನೀವೆ ಹೋಗಿ ಹುಡುಕಿ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್ ಒಡೆಯರ್ ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.