ಮಂಗಳೂರು: ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ, ಕಾನೂನು ಸುವ್ಯವಸ್ಥೆ ಹದಗೆಡಿಸಲು ವ್ಯವಸ್ಥಿತ ಷಡ್ಯಂತ್ರ ನಡೆದಿದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ.
ನಿನ್ನೆ ಮಂಗಳೂರಿನಲ್ಲಿ ತಡರಾತ್ರಿ ನಡೆದ ಘಟನೆಯೊಂದು ಇದಕ್ಕೆ ಪುಷ್ಠಿ ನೀಡುತ್ತಿದ್ದು, ಗಲಭೆ ಸೃಷ್ಟಿಸುವ ಉದ್ದೇಶದಿಂದಲೇ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಚುರುಕಾಗಿ ತನಿಖೆ ನಡೆಸಿದ ಪೊಲೀಸರು ಹಿಂದುತ್ವ ಸಂಘಟನೆಗಳಿಗೆ ಸೇರಿದ ಭರತ್, ಚೆನ್ನಪ್ಪ, ನಿತಿನ್, ಸುಜಿತ್, ಮನು, ಪ್ರೀತಮ್ ಎಂಬ ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿ ಮೇಲೆ ಸಮಾಜಘಾತಕ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.