ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ: ಡಾ.ಯತೀಂದ್ರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಸಂಸದರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಬೇಕು. ಚುನಾವಣೆಯನ್ನು ನಾವು ಗೆದ್ದರೆ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗುತ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ.

ಹೊಳೆನರಸೀಪುರದ ಅಣ್ಣೇಚಾಕನಹಳ್ಳಿಯಲ್ಲಿ ಈ ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.

ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಜನರಿಗೆ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಜಾರಿ ಮಾಡಿದ್ದಾರೆ. ನುಡಿದಂತೆ ನಡೆಯುವವರು ತಾವು ಎಂಬುದನ್ನು‌ ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಡವರು, ಶೋಷಿತರಿಗೆ ಕೆಲಸ ಕೊಡುವ ಹಂಬಲ ಕಾಂಗ್ರೆಸ್ ಗೆ ಇದೆ. ಹಾಗಾಗಿ ಸಿದ್ದರಾಮಯ್ಯನವರಿಗೆ ನೀವು ಬೆಂಬಲ ನೀಡಬೇಕು ಎಂದು ಅವರು ರಾಜ್ಯದ ಜನತೆಗೆ ವಿನಂತಿಸಿದ್ದಾರೆ.

ಮುಂಬರುವ ಏಪ್ರಿಲ್-ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಚುನಾವಣೆ ಉಭಯ ಪಕ್ಷಗಳಿಗೆ ಪ್ರತಿಷ್ಠೆಯ ವಿಷಯವಾಗಿದ್ದು, ಕಳೆದ ಬಾರಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಿಜೆಪಿ ಈ ಬಾರಿ ಕಾಂಗ್ರೆಸ್ ನಿಂದ ಭಾರೀ ಪ್ರತಿರೋಧ ಎದುರಿಸುತ್ತಿದೆ.

More articles

Latest article

Most read