ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನರನ್ನು ನಿನ್ನೆ ಮತ್ತೆ ಪೊಲೀಸರು ಅತ್ಯಾಚಾರ ಆರೋಪದಲ್ಲಿ ಬಂಧಿಸಿದ್ದರು. ಈಗ ಮುನಿರತ್ನ ಕೋರ್ಟ್ ಆದೇಶದ ಮೇರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿ ಹಾಗೂ ಲಂಚಕ್ಕಾಗಿ ಬೇಡಿಕೆ ಇಟ್ಟಿರುವುದು ಹಾಗೂ ಏಡ್ಸ್ ಟ್ರ್ಯಾಪ್ ಪ್ರಕರಣ ಕುರಿತು ಮುನಿರತ್ನ, ಶಾಸಕರು, ಹಾಗೂ ಇತರರ ವಿರುದ್ಧ ದಾಖಲಾಗುವ ಇತರೆ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ರವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸತಕ್ಕದು ಎಂದು ತಿಳಿಸಿದೆ.
ಎಸ್ ಐ ಟಿ ತಂಡದಲ್ಲಿ ಯಾರೆಲ್ಲಾ ಇದ್ದಾರೆ?
ಬಿಕೆ ಸಿಂಗ್ : ( ಅಪರ ಪೊಲೀಸ್ ಮಹಾ ನಿರ್ದೇಶಕರು, ಆರ್ಥಿಕ ಅಪರಾಧಗಳು ಸಿಐಡಿ) ಎಸ್ ಐ ಟಿ ಮುಖ್ಯಸ್ಥರು
ಲಭುರಾಮ್ : ಐಪಿಎಸ್ ( ಪೊಲೀಸ್ ಮಹಾ ನಿರ್ದೇಶಕರು ಕೆಂದ್ರ ವಲಯ) ಸದಸ್ಯರು
ಸೌಮ್ಯಲತಾ : ಐಪಿಎಸ್ ( ಪೊಲೀಸ್ ಅಧೀಕ್ಷಕರು ರೈಲ್ವೇಸ್) – ಸದಸ್ಯರು
ಸಿ.ಎ ಸೈಮನ್ (ಪೊಲೀಸ್ ಅಧೀಕ್ಷಕರು ) – ಸದಸ್ಯರು