ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರಿಂದ ವಿಧಾನಸೌಧ ಮುತ್ತಿಗೆ ಯತ್ನ, ಪೊಲೀಸರ ವಶಕ್ಕೆ

Most read

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್‌ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿಯ ಪ್ರತಿಭಟನೆ ತೀವ್ರವಾಗಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಇಂದು ಪಾಲ್ಗೊಂಡಿದ್ದರು

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ಇಲ್ಲಿನ ವಿಶೇಷ ನ್ಯಾಯಾಲಯ ಆದೇಶಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ವೇದಿಕೆ ಸಜ್ಜಾಗಿದೆ.

ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶ ಹೊರಬಿದ್ದಿದೆ.

More articles

Latest article