ತೆರವುಗೊಳಿಸಿರುವ ಚರ್ಮ ಕುಟೀರಗಳ ಸಮೀಕ್ಷೆ ನಡೆಸಿ ವರದಿ ನೀಡಿ: ತುಷಾರ್ ಗಿರಿ ನಾಥ್

Most read

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ತೆರವುಗೊಳಿಸಿದ್ದ ಚರ್ಮ ಕುಟೀರಗಳಿಗೆ ಸಂಬಂಧಿಸಿದಂತೆ ವಲಯವಾರು ಸಮೀಕ್ಷೆ ನಡೆಸಿ ವರದಿ ನೀಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಚರ್ಮ ಕುಟೀರಗಳಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ 192 ಚರ್ಮ ಕುಟೀರಗಳನ್ನು ತೆರವುಗೊಳಿಸಲಾಗಿತ್ತು. ಅವರಿಗೆ ಕಲ್ಯಾಣ ವಿಭಾಗದಿಂದ ಪುನಃ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಲಯವಾರು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚಿಸಲಾಯಿತು.

192 ಚರ್ಮ ಕುಟೀರಗಳಿಗೆ ಸಂಬಂಧಿಸಿದಂತೆ, ಚರ್ಮ ಕುಟೀರಗರ ಮನೆಗೆ ಭೇಟಿ ನೀಡಿ ಅವರು ಚರ್ಮ ಕುಟೀರ ಕಾರ್ಯದಲ್ಲಿ ಮುಂದುವರಿಯುತ್ತಾರೆಯೇ ಇಲ್ಲವೆ ಎಂಬುದನ್ನು ಖಾತರಿಪಡಿಸಿಕೊಳ್ಳಬೆಕು, ಯಾವ ಸ್ಥಳದಲ್ಲಿ ಚರ್ಮ ಕುಟೀರ ಕೆಲಸ ಮಾಡಲಿದ್ದಾರೆ ಎಂಬ ಮಾಹಿತಿ ಪಡೆಯಬೇಕು. ಜೊತೆಗೆ ಆಯಾ ವಲಯ ವ್ಯಾಪ್ತಿಯಲ್ಲಿ ಯಾವ ಸ್ಥಳದಲ್ಲಿ ಚರ್ಮ ಕುಟೀರಗಳನ್ನು ಅಳವಡಿಸಬೇಕೆಂಬುದನ್ನು ಪರಿಶೀಲಿಸಿ ಮಾಹಿತಿ ನೀಡಲು ಸೂಚಿಸಲಾಯಿತು.

ಈ ವೇಳೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಜಂಟಿ ಆಯುಕ್ತರು, ಕಲ್ಯಾಣ ವಿಭಾಗದ ಅಧಿಕಾರಿಗಳು, ಚರ್ಮ ಕುಟೀರದ ಪದಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article