ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಅನುಮತಿ

Most read

ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. 

ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು. ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

More articles

Latest article