KSRTC ಬಸ್ ಆಯಾತಪ್ಪಿ ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸ್ಯಾಂಜೋ ಆಸ್ಪತ್ರೆ ಬಳಿ ಇಂದು ಬೆಳಗ್ಗೆ ನಡೆಯಿತು.
ಕುಣಿಗಲ್-ಹೆಬ್ಬರು-ತುಮಕೂರು ನಡುವೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಂಟೈನರ್ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿರುವುದರಿಂದ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಯಾಂಜೋ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.