ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಕಿಡಿಗೇಡಿಗೆ ಕಠಿಣ ಶಿಕ್ಷೆ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರು ಒತ್ತಾಯಿಸಿದ್ದಾರೆ

Most read

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕರ್ತವ್ಯ ನಿರತ ನಿರ್ವಾಹಕನ ಮೇಲೆ ವಲಸಿಗ ಪ್ರಯಾಣಿಕ ಚಾಕುವಿನಿಂದ ಇರಿದು ತೀವ್ರ ಸ್ವರೂಪದ ಹಲ್ಲೆ ಮಾಡಿರುವುದನ್ನು ಸಮಸ್ತ ಸಾರಿಗೆ ನೌಕರರು ಖಂಡಿಸಿದ್ದು ಮತ್ತು ಕಿಡಿಗೇಡಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ವಲಸಿಗ ಪ್ರಯಾಣಿಕ ಸಂಸ್ಥೆಯ ವೋಲ್ವೋ ಬಸ್‌ನ ನಿರ್ವಾಹಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ನಿರ್ವಾಹಕನನ್ನು ಪ್ರಯಾಣಿಕರು ಆಸ್ಪತ್ರೆಗೆ ಸೇರಿಸಿದ್ದು, ವೋಲ್ವೋ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿರವರ ನೇತೃತ್ವದಲ್ಲಿಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕರ್ತವ್ಯ ನಿರತ ಸಾರಿಗೆ ನೌಕರರ ಮೇಲೆ ಹಲ್ಲೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ, ಕರ್ತವ್ಯ ನಿರತ ಸಾರಿಗೆ ನೌಕರರಿಗೆ ರಕ್ಷಣೆ ನೀಡಬೇಕು ಹಲ್ಲೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಸಾರಿಗೆ ನೌಕರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

More articles

Latest article