ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

Most read

ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.’

ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್​ರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್​ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು‌ ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.

More articles

Latest article