ಪೋಕ್ಸೋ ಕೇಸ್: ಮುರುಘಾ ಶ್ರೀಗೆ ಜಾಮೀನು ಮಂಜೂರು

ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.

ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.

ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ.

More articles

Latest article

Most read